ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದ ಸಿಐಡಿ ತನಿಖಾಧಿಕಾರಿಗಳ ವಿರುದ್ಧ ಡೆತ್ನೋಟ್ ಬರೆದಿಟ್ಟು ವಕೀಲೆ ಎಸ್. ಜೀವಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಇದಕ್ಕೆ ಸಂಬಂಧಸಿದಂತೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಸಿಐಡಿ ವಿಚಾರಣೆ ಎದುರಿಸಿದ್ದ ಮಹಿಳೆ ಜೀವಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು.
ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿತ್ತು. ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮಿ ವಿರುದ್ಧ ಮೃತಳ ಸಹೋದರಿ ಸಹ ಗಂಭೀರ ಆರೋಪ ಮಾಡಿದ್ದರು.
ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್ಐಆರ್ ದಾಖಲಿಸಿಕೊಂಡಿದದ್ದ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಸಿಸಿಬಿಯ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ. ಈ ಹಿನ್ನೆಲೆ ಭಾನುವಾರವೇ (ನ.24) ಎಂದು ಪೊಲೀಸರು ಪ್ರಾಥಮಿಕ ತನಿಖೆಯ ದಾಖಲೆಯನ್ನ ತನಿಖಾ ತಂಡಕ್ಕೆ ಹಸ್ತಾಂತರಿಸಿದ್ದಾರೆ.