ವಿಜಯನಗರ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಂದ ನಂತರ, ಕೆಲವು ಕಾಂಗ್ರೆಸ್ ಶಾಸಕರು ಪಂಚ ಗ್ಯಾರಂಟಿಯ ಬಗ್ಗೆ ಅಪಸ್ವರವನ್ನು ಎತ್ತಿದ್ದರು. ಇದೀಗ ರಾಜ್ಯ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ತಿರುಗಿ ಬಿದ್ದಿದ್ದು, ಗ್ಯಾರಂಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ.
ಶಕ್ತಿ ಯೋಜನೆ ಸೇರಿದಂತೆ ಇನ್ನೆರೆಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದರು.