ಸೌತ್ ಬ್ಯೂಟಿ ನಟಿ ಕೀರ್ತಿ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೀರ್ತಿ ಸುರೇಶ್ ಮದುವೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡಿದ್ರು ನಟಿ ಯಾವುದಕ್ಕೂ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ಮಹಾನಟಿ ಮದುವೆ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ಲೈಫ್ ಪಾರ್ಟ್ನರ್ ಜೊತೆಗಿನ ಫೋಟೋ ಹಂಚಿಕೊಂಡು ಕೀರ್ತಿ ಸುರೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಉದ್ಯಮಿ ಆಂಟೋನಿ ಜೊತೆ ಕೀರ್ತಿ ಸುರೇಶ್ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಸಖತ್ ಸದ್ದು ಮಾಡಿತ್ತು. ಆದರೆ ಯಾವ ಸುದ್ದಿಗೂ ನಟಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಭಾವಿ ಪತಿ ಆಂಟೋನಿ ಜೊತೆಗಿನ ಫೋಟೋ ಶೇರ್ ಮಾಡಿ, 15 ವರ್ಷಗಳ ಬಂಧ ಎಂದು ನಟಿ ಬರೆದುಕೊಂಡಿದ್ದಾರೆ. ಯಾವಾಗಲೂ ಆಂಟೋನಿ ಮತ್ತು ಕೀರ್ತಿ ಎಂದು ಕ್ಯಾಪ್ಷನ್ ನೀಡಿದ್ದಾರೆ.
15 ವರ್ಷಗಳ ಪ್ರೀತಿಯಲ್ಲಿದ್ದ ಕೀರ್ತಿ ಸುರೇಶ್ ಹಾಗೂ ಆಂಟೋನಿ ಡಿ.11ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಗೋವಾದಲ್ಲಿ ಮದುವೆ ನಡೆಯಲಿದ್ದು ಡೆಸ್ಟಿನೇಷನ್ ವೆಡ್ಡಿಂಗ್ಗೆ ಪ್ಲ್ಯಾನ್ ಮಾಡಲಾಗಿದೆಯಂತೆ. ಆಪ್ತರಿಗಷ್ಟೇ ಮದುವೆಗೆ ಆಹ್ವಾನ ನೀಡುತ್ತಿದ್ದು ಬಳಿಕ ಜೋಡಿ ಗ್ರ್ಯಾಂಡ್ ಆಗಿ ರಿಸೆಪ್ಷನ್ ಮಾಡಿಕೊಳ್ಳಲಿದ್ದಾರಂತೆ.