ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಗಲೇ ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯಯೂ ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಹಾಗೆಯೇ ಡಿಸೆಂಬರ್ 13ರ ವರೆಗೂ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಹಾಸನ, ತುಮಕೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಲಕ್ಷಣಗಳು ಇರುವುದಿಲ್ಲ ಎಂದು ತಿಳಿಸಿದೆ.
ಡಿಸೆಂಬರ್ 5ರಿಂದ 13ರ ವರೆಗೆ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಬಳ್ಳಾರಿ, ಕೊಪ್ಪಳ ಸೇರಿದಂತರ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.