ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸ್ವಾಮೀಜಿ ವಿರುದ್ಧ ಸೈಯ್ಯದ್ ಅಬ್ಬಾಸ್ ಎಂಬವರು ದೂರು ನೀಡಿದ್ದಾರೆ. ಬಿಎನ್ಎಸ್ ಸೆಕ್ಷನ್ 299ರಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.