ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಐದು ವರ್ಷಗಳ ಅಧಿಕಾರ ಪೂರೈಸುತ್ತಾರೋ ಇಲ್ವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ, ಆದರೆ ನಾವು ಸಿಎಂ ಸಿದ್ದರಾಮಯ್ಯ ಐದು ವರ್ಷ ಇರಬೇಕು ಅಂತ ಬಯಸುತ್ತೇವೆ ಎಂದಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ಪ್ರಸ್ತಾಪ ನಡುವೆಯೇ ಶಾಸಕ ಪಾಟೀಲ್ ಹೇಳಿಕೆ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.
ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ ಈ ವಿಚಾರವಾಗಿ ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೇ ನಾವೇನು ಮಾಡೋದಕ್ಕೆ ಆಗುತ್ತೆ. ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ಆದರೆ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತ ಯಾವ ಶಾಸಕರ ಮನಸ್ಸಿನಲ್ಲಿ ಇಲ್ಲ ಎಂದರು.
ಗ್ಯಾರಂಟಿ ಯೋಜನೆಗೆ ಹೊಸ ಆರ್ಥಿಕ ನೀತಿ.?
ದೊಡ್ಡ ಕನಸನ್ನು ಕಂಡು ಬಡವರ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡಾಗ ಭೌತಿಕ ಅಭಿವೃದ್ಧಿಗೆ ಹೊಡೆತ ಬೀಳುತ್ತೆ. ಈ ಬಾರಿಯ ಬಜೆಟ್ನಲ್ಲಿ ಗ್ಯಾರಂಟಿ ನಿಂದ ಆರ್ಥಿಕ ಹೊರ ಆಗದಂತೆ ಹೊಸ ಆರ್ಥಿಕ ನೀತಿ ಮಾಡುತ್ತಾರೆ. ಕಲ್ಯಾಣ ರಾಜ್ಯದ ಪರಿಕಲ್ಪನೆ ಕಾಣುತ್ತಿದ್ದೇವೆ ಎಲ್ಲರಿಗೂ ಸಮಪಾಲು ಸಮಬಾಳು ಇದು ನಮ್ಮ ಧ್ಯೇಯ. ಐದು ಗ್ಯಾರಂಟಿಗಳು ಬಹಳಷ್ಟು ಯಶಸ್ವಿಯಾಗಿ ಅನುಷ್ಠಾನ ಆಗುತ್ತಿವೆ. ಇದರಿಂದ ಬಹಳಷ್ಟು ರಾಜಕೀಯ ಲಾಭ ಆಗುತ್ತಿದೆ.
ಬಿಪಿಎಲ್ ಕಾರ್ಡ್ ವಿವಾದ ಬಿಜೆಪಿ ಹುಟ್ಟಿಸಿದ ಭಯವಷ್ಟೇ
ಬಿಪಿಎಲ್ ಕಾರ್ಡ್ ವಿವಾದ ಬಿಜೆಪಿ ಹುಟ್ಟಿಸಿದ ಭಯವಷ್ಟೇ. ಆದರೆ ಯಾವುದೇ ಗ್ಯಾರಂಟಿ ನಿಲ್ಲೋದಿಲ್ಲಾ , ಇದನ್ನು ಪರಿಹಾರ ಮಾಡುತ್ತೇವೆ. ನಮಗೆ ಕೇಂದ್ರ ಅನ್ಯಾಯ ಮಾಡುತ್ತಿದೆ. ನಮ್ಮ ಪಾಲು ನಮಗೆ ನೀಡುತ್ತಿಲ್ಲ ಎಂದರು. ಮೂರು ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ ಎಲ್ಲಾ ಹಗರಣಗಳು ಕಲ್ಪನೆ ಆಗಿದೆ. ಮುಡಾ ಹಗರಣ ನೂರಕ್ಕೆ ನೂರರಷ್ಟು ಮುಕ್ತರಾಗಿ ಸಿಎಂ ಹೊರ ಬರ್ತಾರೆ. ಹಗರಣಗಳು ಬರೀ ನಮ್ಮ ಕಾಲದಲ್ಲಿ ಮಾತ್ರವಲ್ಲ ಎಲ್ಲಾ ಸರ್ಕಾರದಲ್ಲಿ ಆಗಿವೆ ಸಿಎಂ ಪರ ಬ್ಯಾಟ್ ಬೀಸಿದರು. ವಕ್ಪ್ ಬೋರ್ಡ್ ವಿಚಾರವಾಗಿ ಬಿಜೆಪಿ ಸಹ ನೋಟಿಸ್ ನೀಡಿತ್ತು. ದುರುದ್ದೇಶದಿಂದ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುಬೇಕು, ಕೆಟ್ಟ ಹೆಸರು ತರಬೇಕು ಅಂತ ಮಾಡುತ್ತಿದ್ದಾರೆ. ಬಿಜೆಪಿಯವರು ಒಂದಾಗಿ ವಕ್ಪ್ ಬೋರ್ಡ್ ಜನಜಾಗೃತಿ ಮಾಡಲಿ ಅವರಲ್ಲೇ ಒಡಕಿದ್ದು, ನಮ್ಮನ್ನೇನು ನೋಡ್ತಾರೆ ಎಂದು ತಿರುಗೇಟು ನೀಡಿದರು.