ಬೆಂಗಳೂರು: ನಿರಂತರವಾಗಿ ಗ್ಯಾಸ್ ಬೆಲೆ ಹೆಚ್ಚಳ ಹಿನ್ನೆಲೆ ಬೆಂಗಳೂರಿನ ಹೋಟೆಲ್ ಮಾಲೀಕರು ಊಟ, ತಿಂಡಿ ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಗ್ಯಾಸ್ ದರ ಹೆಚ್ಚಳ ಆಗಿರುವ ಕುರಿತು ಕೇಂದ್ರ ಸಚಿವರ ಜೊತೆ ಹೋಟೆಲ್ ಮಾಲೀಕರು ಮಾತುಕತೆ ನಡೆಸಿದ್ದಾರೆ. ದರ ಏರಿಕೆಯಿಂದ ಉಂಟಾಗ್ತಿರೋ ತೊಂದರೆ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ಕೇಂದ್ರದಿಂದ ಯಾವುದೇ ಸೂಕ್ತ ಸ್ಪಂದನೆ ವ್ಯಕ್ತವಾಗದ ಹಿನ್ನಲೆ ಹೋಟೆಲ್ ಮಾಲೀಕರು ಬೆಲೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಹೋಟೆಲ್ಗಳಲ್ಲಿ ಬಳಕೆ ಮಾಡುವ ಪ್ರತಿಯೊಂದು ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ದರ ಏರಿಸದಿದ್ರೆ ಹೋಟೆಲ್ ನಡೆಸೋದೆ ಕಷ್ಟ ಎನ್ನುತ್ತಿರೋ ಹೋಟೆಲ್ ಮಾಲೀಕರು ಹೀಗಾಗಿ ಶೇ.10ರಷ್ಟು ಏರಿಕೆ ಮಾಡುವ ಬಗ್ಗೆ ಹೋಟೆಲ್ ಮಾಲೀಕರು ಚರ್ಚೆ ನಡೆಸಿದ್ದಾರೆ. ಈಗಾಗಲೇ ಈ ಬಗ್ಗೆ ಸಭೆ ನಡೆಸಿರೋ ಬೆಂಗಳೂರು ಹೋಟೆಲ್ ಮಾಲೀಕರ ಸಂಘ. ಇನ್ನು ಕೆಲವೇ ದಿನಗಳಲ್ಲಿ ಬೆಲೆ ಏರಿಕೆ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಗ್ಯಾಸ್ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆ ಹೋಟೆಲ್ ಮಾಲೀಕರು ಶೇ.10ರಷ್ಟು ಬೆಲೆಏರಿಕೆ ಮಾಡಲು ಹೊರಟಿರುವುದು ಗ್ರಾಹಕರಿಗೆ ದೊಡ್ಡ ಶಾಕ್ ಎದುರಾಗಿದೆ.