ಬೆಂಗಳೂರು: ರಾಹುಲ್ ಗಾಂಧಿಯವರನ್ನು ಬೆಂಬಲಿಸಿ ‘ನಮ್ಮ ಮನೆಯೂ ನಿಮ್ಮದೇ ಮನೆ’ ಎಂಬ ಸಂದೇಶ ಇರುವ ಬಿತ್ತಿ ಪತ್ರವನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅನಾವರಣಗೊಳಿಸಿದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ಫೋಟೋ ಹಂಚಿಕೊಂಡಿದ್ದಾರೆ. ಸಂಸದ ಸ್ಥಾನದಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅನರ್ಹಗೊಂಡ ಬೆನ್ನಲ್ಲೇ, ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ವಿನೂತನ ಅಭಿಯಾನ ಆರಂಭಿಸಿದ್ದಾರೆ. ‘ನಮ್ಮ ಮನೆಯೇ ನಿಮ್ಮ ಮನೆ’ ಅಭಿಯಾನ ಎಂದು ಕಾಂಗ್ರೆಸ್ ಶಾಸಕರು ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ರಾಮಲಿಂಗಾ ರೆಡ್ಡಿ, ಶಾಸಕ ಜಮೀರ್ ಅಹ್ಮದ್ ಇನ್ನು ಅನೇಕ ನಾಯಕರು ರಾಹುಲ್ ಗಾಂಧಿಗೆ ತಮ್ಮ ನಿವಾಸಕ್ಕೆ ಆಹ್ವಾನ ನೀಡಿದ್ದಾರೆ.