ಬೆಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 3, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಬಹುದು. ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.