ಚಂಡೀಗಢ: 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಂಜಾಬ್ ಕಾಂಗ್ರೆಸ್ (Punjab Congress) ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶನಿವಾರ ಜೈಲಿನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಧು, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ʻʻಪ್ರಜಾಪ್ರಭುತ್ವವು ಸರಪಣಿಯಲ್ಲಿ ಬಂಧಿತವಾಗಿದೆʼʼ ಎಂದು ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಿಡಿಕಾರಿದ್ದಾರೆ. ಮುಂದುವರಿದು ಈ ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ (Rahul Gandhi) ಅವರ ರೂಪದಲ್ಲಿ ಕ್ರಾಂತಿ ಬಂದಿದೆ, ಅವರು ಸರ್ಕಾರವನ್ನ ಸಮರ್ಥವಾಗಿ ಎದುರಿಸಲಿದ್ದಾರೆ’ ಎಂದು ಹೊಗಳಿದ್ದಾರೆ.
ಆಮ್ ಆದ್ಮಿ ಪಕ್ಷದ ಸರ್ಕಾರವಿರುವ ಪಂಜಾಬ್ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಬಿಜೆಪಿಯವರು ಪಂಜಾಬ್ ಅನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ನಾನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಲ್ಲ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಗೋಡೆಯಂತೆ ನಿಲ್ಲುತ್ತೇನೆ ಎಂದು ಸಿಧು ಹೇಳಿದ್ದಾರೆ.