ಸಾಮಾನ್ಯವಾಗಿ ಎಲ್ಲರೂ ಪಪ್ಪಾಯಿ ಹಣ್ಣಾದ ಬಳಿಕ ತಿನ್ನುತ್ತಾರೆ. ಆದರೆ, ಪಪ್ಪಾಯಿ ಹಣ್ಣಿನ ಹಂತಕ್ಕಿಂತ ಮುನ್ನವೇ ಅಂದ್ರೆ, ಹಸಿರು ಪಪ್ಪಾಯಿಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ. ಹಸಿರು ಪಪ್ಪಾಯಿಯಿಂದ ಆರೋಗ್ಯಕ್ಕೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ತಿಳಿಯೋಣ.
ಕ್ಯಾನ್ಸರ್ ಬರದಂತೆ ತಡೆಯುತ್ತೆ:ಹಸಿ ಪಪ್ಪಾಯಿಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳಾದ ಲೈಕೋಪೀನ್ ಮತ್ತು ಬೀಟಾ-ಕ್ಯಾರೋಟಿನ್ ದೇಹದಿಂದ ಹಾನಿಕಾರಕ ಅಂಶಗಳನ್ನು ತೆಗೆದುಹಾಕುತ್ತದೆ. ಜೀವಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ ಎಂದು ತಜ್ಞರು ತಿಳಿಸುತ್ತಾರೆ.
ವಿಶೇಷವಾಗಿ ಪುರುಷರಲ್ಲಿ ಪ್ರಾಸ್ಟೇಟ್ ಮತ್ತು ಕರುಳಿನ ಕ್ಯಾನ್ಸರ್ನಂತಹ ಕೆಲವು ಕ್ಯಾನ್ಸರ್ಗಳ ಅಪಾಯವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ ಎಂದು ತಜ್ಞರು ಮಾಹಿತಿ ನೀಡುತ್ತಾರೆ. ಅನೇಕ ಅಧ್ಯಯನಗಳು ಸಹ ಇದೇ ಮಾಹಿತಿಯನ್ನು ಸ್ಪಷ್ಟಪಡಿಸಿವೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ನ ಸದಸ್ಯರ ತಂಡ ಕೂಡ ಇದೇ ಅಂಶವನ್ನು ಅಧ್ಯಯನದಲ್ಲಿ ತಿಳಿಸಿದೆ.
ಜಾಂಡೀಸ್:ಜಾಂಡೀಸ್ ತಡೆಗಟ್ಟುವಲ್ಲಿ ಹಸಿರು ಪಪ್ಪಾಯಿ ತುಂಬಾ ಪ್ರಯೋಜನಕಾರಿ. ಪ್ರತಿ ಮೂರು ಗಂಟೆಗಳಿಗೊಮ್ಮೆ ಅರ್ಧ ಗ್ಲಾಸ್ ಪಪ್ಪಾಯಿ ರಸವನ್ನು ಕುಡಿಯುವುದು ಜಾಂಡೀಸ್ ನಿವಾರಿಸುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ.,,
ಜೀರ್ಣಕ್ರಿಯೆಗೆ ಉತ್ತಮ:ಹಸಿರು ಪಪ್ಪಾಯಿಯಲ್ಲಿರುವ ಪಪೈನ್ ಎಂಬ ಕಿಣ್ವವು ಜೀರ್ಣಕ್ರಿಯೆಗೆ ಸಹಾಯ ಮಾಡುವ ಗ್ಯಾಸ್ಟ್ರಿಕ್ ಆಮ್ಲಗಳ ಸ್ರವಿಸುವಿಕೆಯನ್ನು ಹೆಚ್ಚಿಸಲು ತುಂಬಾ ಉಪಯುಕ್ತವಾಗಿದೆ. ಇದರಲ್ಲಿರುವ ಕಿಣ್ವಗಳು ಹೊಟ್ಟೆಯ ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುತ್ತವೆ. ಇದರ ಪರಿಣಾಮವಾಗಿ ಜೀರ್ಣಕ್ರಿಯೆಯು ಸುಧಾರಿಸುತ್ತದೆ ಹಾಗೂ ಅಜೀರ್ಣ, ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ತಜ್ಞರು ಹೇಳುತ್ತಾರೆ.
ತೂಕ ಇಳಿಕೆಗೆ ಒಳ್ಳೆಯದು:ಹಸಿರು ಪಪ್ಪಾಯಿಯಲ್ಲಿ ಕ್ಯಾಲೋರಿ ಕಡಿಮೆ. ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬಾ ಹೊತ್ತು ತುಂಬಿದಂತಾಗುತ್ತದೆ. ಇದರಿಂದ ಅನಗತ್ಯ ಆಹಾರ ಸೇವನೆ ಕಡಿಮೆಯಾಗುತ್ತದೆ. ಇದರಿಂದ ತೂಕವನ್ನು ಕಡಿಮೆ ಮಾಡಬಹುದು ಎನ್ನುತ್ತಾರೆ ಸಂಶೋಧಕರು