ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಡಿಹಂಚಿನಲ್ಲಿರುವ ಗೋಪಿನಾಥಂ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಂಚಿನ ಕೆಲ ಗ್ರಾಮಗಳಿಗೆ ಚಾಮರಾಜನಗರ ಜಿಲ್ಲಾ ಡಿಎಚ್ಒ ಡಾ ಎಸ್ ಚಿಂದಬರ ಭೇಟಿ ನೀಡಿ ಅಲ್ಲಿನ ಜನತೆ ಸಮಸ್ಯೆಗಳನ್ನು ಆಲಿಸಿದರು.
ಹನೂರು ತಾಲೂಕಿನ ಗಡಿಹಂಚಿನಲ್ಲಿರುವ ಗೋಪಿನಾಥಂ ಗ್ರಾಪಂ ವ್ಯಾಪ್ತಿಯ ನಾಗಮಲೆ, ಆಲಂಬಾಡಿ ಸೇರಿ ಕೆಲ ಗ್ರಾಮಗಳಿಗೆ ತೆರಳಿ ಅಲ್ಲಿಯ ಜನತೆಯ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಅಲ್ಲಿನ ಸ್ಥಿತಿಗತಿಯ ಬಗ್ಗೆ ಸಮಲೋಚನೆ ನಡೆಸಿದರು .
ಈ ವೇಳೆ ಗ್ರಾಮಸ್ಥರು ಮಾತನಾಡಿ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆಗಾಗಿ ತಮಿಳುನಾಡು ರಾಜ್ಯದ ಆಸ್ಪತ್ರೆಗೆ ತೆರಳಬೇಕಾಗಿದೆ. ಈ ಭಾಗದಲ್ಲಿ ಸುಸರ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯುವಂತೆ ಜಿಲ್ಲಾಡಳಿತ ಮತ್ತು ಶಾಸಕರು ಭೇಟಿ ನೀಡಿದ್ದ ಸಂದರ್ಭದಲ್ಲಿ ರೈತ ಸಂಘಟನೆಯ ಮುಖಂಡರುಗಳ ಜೊತೆಗೂಡಿ ಮನವಿ ಸಲ್ಲಿಸಿದ್ದವು ಆದ್ದರಿಂದ ಈ ಭಾಗದಲ್ಲಿ ಸುಸರ್ಜಿತವಾದ ಆಸ್ಪತ್ರೆ ನಿರ್ಮಾಣ ಮಾಡುವಂತೆ ಕೋರಿದರು.
ಬಳಿಕ ಮಾತನಾಡಿದ ಡಿಎಚ್ಒ ಗೋಪಿನಾಥ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲು ಒಂದು ಎಕರೆ ಸರಕಾರಿ ಜಾಗವನ್ನು ಗುರುತು ಮಾಡಲಾಗಿದೆ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಲ್ಲಿಯ ಜನತೆಗೆ ನೀಡಿದರು
ಬಳಿಕ ಮಹದೇಶ್ವರ ಬೆಟ್ಟ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯವನ್ನು ಹೂಡಿ ಚಿಕಿತ್ಸೆಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ಡಿಎಚ್ಒ ಪ್ರಕಾಶ್ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ನಿಂಬೆಶ್ ಸೇರಿದಂತೆ ಹಲವರು ಹಾಜರಿದ್ದರು.