ಬಳ್ಳಾರಿ: ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದೆ.
ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.