ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಭಾನುವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಸುಲೋಚನಾ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಟೈರ್ ಸ್ಫೋಟಗೊಂಡು ಬೈಕ್ ಪಲ್ಟಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೈಕ್ನಲ್ಲಿ ತೆರಳುತ್ತಿದ್ದ ಆನಂದ್, ಸುಲೋಚನಾ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಯುವತಿ ಸುಲೋಚನ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಾಲ್ಫ್ ಹೆಲ್ಮೆಟ್ ಧರಿಸಿದ್ದರಿಂದ ಸುಲೋಚನ ತಲೆಗೆ ಗಂಭೀರ ಗಾಯವಾಗಿತ್ತು.
ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ ಸುಲೋಚನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದ ಸುಲೋಚನ, ಆನಂದ್ ಅವರು, ನಿನ್ನೆ ಕೆಲಸ ಮುಗಿಸಿ ಕೋರಮಂಗಲದಿಂದ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡೆದಿದ್ದ ಅವಘಡದಲ್ಲಿ ಕೊನೆಗೂ ಯುವತಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.