ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು.
ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರೋ ಡಿಕೆ ಶಿವಕುಮಾರ್ ಎಲ್ಲಾ ಚುನಾವಣಾ ಸಂಕಷ್ಟಗಳಿಂದ ದೂರವಾಗಲು ಗುರುಗಳಾದ ಶ್ರೀ ಹರೀಶ್ ಆರಾಧ್ಯ ಅವರ ಮಾರ್ಗ ಅರ್ಶದನದಂತೆ ಬೆಳಗಳಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಮಹಾ ಆರತಿ ಪೂಜೆಯನ್ನು ಮಾಡಿಸಿದ್ದಾರೆ. ಇದಲ್ಲದೇ ಮಧ್ಯಪ್ರದೇಶದ ಶ್ರೀ ಮಹಾಕಾಲೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಹ ಸಲ್ಲಿಸಲಿದ್ದಾರೆ. ಸದ್ಯಕ್ಕೆ ಚುನಾವಣಾ ಬಿಸಿಯ ಮದ್ಯ ಡಿ.ಕೆ. ಶಿವಕುಮಾರ್ ಪೂಜೆಯನ್ನು ಸಲ್ಲಿಸುತ್ತಿರುವುದ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.