ಬೆಂಗಳೂರು: 2024 ವರ್ಷ ಮುಗಿದಿದೆ, 2025ನೇ ವರ್ಷಕ್ಕೆ ಕಾಲಿಟ್ಟಿದ್ದು, ವಿಶ್ವದಾದ್ಯಂತ ಗ್ರ್ಯಾಂಡ್ ವೆಲ್ಕಮ್ ಮಾಡಿಯೂ ಆಯ್ತು. ಹೊಸ ವರ್ಷವನ್ನು ಎಲ್ಲೆಡೆ ಅದ್ಧೂರಿಯಾಗಿ ಸ್ವಾಗತಿಸಲಾಯ್ತು. ಜನರು ಕುಡಿದು, ಕುಣಿದು ಹೊಸ ವರ್ಷದ ಹರುಷವನ್ನು ಅದ್ಧೂರಿಯಾಗಿ ಸೆಲೆಬ್ರೇಟ್ ಮಾಡಿದ್ರು.
ಇನ್ನು ನ್ಯೂ ಇಯರ್ ಸೆಲಬ್ರೇಷನ್ ಬಳಿಕ ಪಾನಮತ್ತರಾಗಿ ವಾಹನ ಚಲಾಯಿಸುತ್ತಿದ್ದವರಿಗೆ ಬೆಂಗಳೂರು ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ತಡರಾತ್ರಿ ನಗರದಾದ್ಯಂತ 28,127ಕ್ಕೂ ಹೆಚ್ಚು ವಾಹನಗಳ ತಪಾಸಣೆ ಕೈಗೊಂಡ ಸಂಚಾರ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಒಟ್ಟು 513 ಪ್ರಕರಣಗಳನ್ನ ದಾಖಲಿಸಿಕೊಂಡಿದ್ದಾರೆ.
=ಕಳೆದ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ 7,620 ವಾಹನಗಳ ಚಾಲಕರನ್ನ ತಪಾಸಣೆಗೊಳಪಡಿಸಿದ್ದ ಪೊಲೀಸರು ಪಾನಮತ್ತನಾಗಿದ್ದ 330 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.