ವಿಶ್ವದ ಜನಪ್ರಿಯ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೊರಹೊಮ್ಮಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನು ಹಿಂದಿಕ್ಕಿ ಮೋದಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಜಾಗತಿಕ ನಾಯಕರ ಪ್ರಮುಖ ನಿರ್ಧಾರಗಳನ್ನು ಹಾಗೂ ಅವರ ಜನಪ್ರಿಯತೆಯ ಮೂಲಕ ನಿರ್ಧಾರಿಸುವ ಜಾಗತಿಕ ನಿರ್ಧಾರ ಗುಪ್ತಚರ ಸಂಸ್ಥೆಯಾದ ಮಾರ್ನಿಂಗ್ ಕನ್ಸಲ್ಟ್ ಈ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ವಿಚಾರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಅತ್ಯಂತ ಪ್ರೀತಿಸುವ ಮತ್ತು ಮೆಚ್ಚಿದ ನಾಯಕ ಎಂದು ಬರೆದುಕೊಂಡಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಪ್ರಕಾರ, ಪ್ರಧಾನಿ ಮೋದಿ ಅವರು ಶೇಕಡಾ 76ರ ಅನುಮೋದನೆ ರೇಟಿಂ
ಗ್ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಎರಡನೇ ಸ್ಥಾನವನ್ನು ಗಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಪ್ರೀತಿಪಾತ್ರ, ಮೆಚ್ಚುಗೆ ಮತ್ತು ವಿಶ್ವಾಸಾರ್ಹ ಜಾಗತಿಕ ನಾಯಕರಾಗಿ ಉಳಿದಿದ್ದಾರೆ ಎಂದು ಗೋಯಲ್ ತಮ್ಮ ಟ್ವೀಟ್ನಲ್ಲಿ ಸಮೀಕ್ಷೆಯನ್ನು ಹಂಚಿಕೊಂಡಿದ್ದಾರೆ.