ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಸರಿಗಮಪದಲ್ಲಿ ತನ್ನ ಮಧುರ ಕಂಠದ ಮೂಲಕ ವೀಕ್ಷಕರ ಮನ ಗೆದಿದ್ದ ಮಂಜಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸರಿಗಮಪ ಸೀಸನ್ 17ರಲ್ಲಿ ಭಾಗಿಯಾಗುವ ಮುನ್ನ ವಿಶೇಷ ಚೇತನ ಗಾಯಕಿಯರಾದ ಮಂಜಮ್ಮ ಮತ್ತು ರತ್ನಮ್ಮ ದೇವಸ್ಥಾನದ ಮುಂದೆ ಹಾಡುತ್ತಿದ್ದರು. ಮಂಜಮ್ಮ ಮತ್ತು ರತ್ನಮ್ಮ ಕಂಠಕ್ಕೆ ಮನಸೋತ ಜೀ ಕನ್ನಡ ತಮ್ಮ ಸರಿಗಮಪ ವೇದಿಕೆಗೆ ಇವರನ್ನು ಕರೆತಂದಿತ್ತು. ಇನ್ನು ಮಂಜಮ್ಮ ಮತ್ತು ರತ್ನಮ್ಮ ಇಬ್ಬರಿಗೂ ಹುಟ್ಟಿನಿಂದಲೇ ಕಣ್ಣು ಕಾಣಿಸುವುದಿಲ್ಲ. ಸಂಗೀತದ ಅಭ್ಯಾಸವನ್ನು ಕೂಡ ಇಬ್ಬರು ಯಾರ ಬಳಿ ಮಾಡಿಲ್ಲ. ಆದರೂ ಕೂಡ ತಮ್ಮ ಚಿನ್ನದ ಕಂಠದಿಂದ ಇಬ್ಬರು ಮೋಡಿ ಮಾಡಿದ್ದರು. ಸರಿಗಮಪ ಕಾರ್ಯಕ್ರಮದ ಮೂಲಕ ಕನ್ನಡಿಗರ ಹೃದಯವನ್ನು ಗೆದ್ದಿದ್ದರು.
ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ. ದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.