ಬೆಂಗಳೂರು: ಬೆದರಿಕೆ ಕರೆ ಆರೋಪದ ಹಿನ್ನೆಲೆ ಬಸವ ಜಯಮೃತ್ಯಂಜಯ ಸ್ವಾಮೀಜಿ ಅವರಿಗೆ ಪೊಲೀಸ್ ಭದ್ರತೆ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಅರವಿಂದ್ ಬೆಲ್ಲದ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸ್ವಾಮೀಜಿಗಳಿಗೆ ಬೆದರಿಕೆ ಕರೆ ಬರುತ್ತಿದೆ. ಹೀಗಾಗಿ ಸೂಕ್ತ ಭದ್ರತೆಯನ್ನು ಶ್ರೀಗಳಿಗೆ ಕಲ್ಪಿಸಲು ಮನವಿ ಮಾಡಿದ್ದರು. ಪ್ರತಿ ದಿನವೂ ಶ್ರೀಗಳಿಗೆ ದೂರವಾಣಿ ಕರೆಗಳು ಬರುತ್ತಿದ್ದು, ನಿಂದನಾತ್ಮಕವಾದ ಮಾತುಗಳನ್ನಾಡುತ್ತಾರೆ. ಕೆಲವರು ಕುಡಿದು ಸಹ ಮಾತನಾಡಿ ಶ್ರೀಗಳ ಮನನೋಯಿಸುತ್ತಿದ್ದಾರೆ.
ಇನ್ನು ಕೆಲ ಕರೆಗಳು ಬೆದರಿಕೆ ಕರೆಗಳಾಗಿವೆ, ಹಾಗಾಗಿ ಶ್ರೀಗಳಿಗೆ ಸೂಕ್ತ ಭದ್ರತೆಯ ಅಗತ್ಯವಿದೆ ಸಿಎಂಗೆ ಮನವಿ ಮಾಡಿದರು. ಶಾಸಕರ ಅರವಿಂದ ಬೆಲ್ಲದ್ ಅವರ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ ಅವರು ಬೆದರಿಕೆ ಕರೆಗಳ ದಾಖಲೆ ಪರಿಶೀಲಿಸಿ ಸೂಕ್ತ ಭದ್ರತೆ ನೀಡುವಂತೆ ಪೊಲಿಸ್ ಇಲಾಖೆಗೆ ಸೂಚನೆ ನೀಡಿದರು. ಹಾಗಾಗಿ ಇನ್ನು ಮುಂದೆ ಬಸವ ಜಯಮೃತ್ಯುಂಜಯ ಶ್ರೀಗಳು ಪೊಲೀಸ್ ಭದ್ರತೆಯಲ್ಲಿ ಸಂಚಾರ ಮಾಡಲಿದ್ದಾರೆ.