ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಯಡಿಯೂರಪ್ಪ ಅವರು ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಸದ್ಯಕ್ಕೆ ಅವರಿಗೆ ನಿರೀಕ್ಷಣಾ ಜಮೀನು ಮಂಜೂರು ಮಾಡಿದೆ.
ಆದರೆ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)