ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಬಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದ ಘಟನೆ ನಡೆದಿದೆ. ಅಳ್ಳಗಿ ಗ್ರಾಮದ ಶರಣಪ್ಪ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೊತ್ತಿ ಉರಿದ ಜೆಸ್ಕಾಂ ಪವರ್ ಸ್ಟೇಷನ್: 25 ಗ್ರಾಮಗಳಿಗೆ ವಿದ್ಯುತ್ ಸ್ಥಗಿತ
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್ ಹೊತ್ತಿ ಉರಿದಿದೆ. ನಿನ್ನೆ (ಏ.2) ರಂದು ಸಾಯಂಕಾಲ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯುತ್ ಸರಬರಾಜನ್ನು ಬಂದ್ ಮಾಡಲಾಗಿದೆ. ಈ ಹಿನ್ನೆಲೆ ಸೇಡಂ ತಾಲೂಕಿನ 25 ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
ಇನ್ನು ಬಿಸಿಲಿನ ತಾಪಮಾನ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.