ನಟ ಕಿಚ್ಚ ಸುದೀಪ್ ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಸಿದ್ದವಾಗಿದ್ದಾರೆ. ಆದರೆ ಈ ಮಧ್ಯೆ ಸುದೀಪ್ ಗೆ ಗೆ ಬೆದರಿಕೆ ಪತ್ರ ಬಂದಿದ್ದು, ಇದೀಗ ಈ ಕೇಸ್ ಸಿಸಿಬಿಗೆ ವರ್ಗಾವಣೆ ಆಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಪತ್ರಬರೆದ ಕಿಡಿಗೇಡಿಯನ್ನು ಹುಡುಕಲಾಗುತ್ತಿದೆ.
ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದ್ದು, ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಮಾಡಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ‘ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು’ ಎಂದು ಮಂಜು ದೂರಿದ್ದು, ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣ ಈಗ ಸಿಸಿಬಿಗೆ ವರ್ಗಾವಣೆ ಆಗಿದೆ.
ಸುದೀಪ್ ಬಿಜೆಪಿ ಪರ ಪ್ರಚಾರ ಮಾಡಲು ಸಿದ್ದವಾಗಿದ್ದಾರೆ. ಈ ಕುರಿತು ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ.