ನಟ ಕಿಚ್ಚ ಸುದೀಪ್ ಅವರಿಗೆ ಕಿಡಿಗೇಡಿಗಳು ಬೆದರಿಕೆ ಪತ್ರ ಕಳಿಸಿರುವ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಪ್ರಕರಣವನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಿಬಿಐಗೆ ವರ್ಗಾಹಿಸಿದ್ದಾರೆ. ಸುದೀಪ್ ಬಿಜೆಪಿ ಪರ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬೆದರಿಕೆ ಪತ್ರ ಬಂದಿರುವುದರಿಂದ ಇದು ರಾಜಕೀಯದವರ ಕೈವಾಡ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆದರಿಕೆ ಪತ್ರ ಬರೆದಿರುವುದು ರಾಜಕೀಯದವರಲ್ಲ, ಖಂಡಿತ ಇದನ್ನ ಚಿತ್ರರಂಗದವರೇ ಮಾಡಿಸಿದ್ದಾರೆ. ಯಾರು ಅಂತ ಗೊತ್ತಿದ್ದರೂ ಕೂಡ ಈಗ ಸೈಲೆಂಟಾಗಿ ಇರುತ್ತೇನೆ. ಅದಕ್ಕೆ ಹೇಗೆ ಉತ್ತರ ಕೊಡಬೇಕು ಅಂತ ನನಗೆ ಗೊತ್ತಿದೆ. ಇವೆಲ್ಲ ಕಾನೂನಿನ ಪ್ರಕಾರ ಹೋದರೆ ಒಳ್ಳೆಯದು’ ಎಂದಿದ್ದಾರೆ.
‘ಯಾರು ಪತ್ರ ಬರೆದಿದ್ದಾರೆ ಎಂಬ ವಿಚಾರ ಹೊರಗಡೆ ಬರುತ್ತದೆ. ಅದನ್ನು ನಾನು ಸುಮ್ಮನೆ ಬಿಡುವುದಿಲ್ಲ. ಕೆಲವು ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಅದಕ್ಕೆ ಬದ್ಧವಾಗಿದ್ದು, ಎಲ್ಲ ಪಕ್ಷದಲ್ಲೂ ನನಗೆ ಆತ್ಮೀಯರು ಇದ್ದಾರೆ. ನನ್ನ ಪರ ಇರುವವರಿಗಾಗಿ ನಾವು ಕೆಲವು ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ.