ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸಾಕಷ್ಟು ಜನಜಾಗೃತಿ ಕಾರ್ಯಕ್ರಮಗಳ ಮೂಲಕ ಮಾತ್ರವಲ್ಲದೆ ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಜನಮನ್ನಣೆ ಪಡೆದಿದೆ. ಈ ನಿಟ್ಟಿನಲ್ಲಿ ಇ.ಆರ್.ಎಸ್.ಎಸ್ 112 ಪೋಸ್ಟರ್ ಬಿಡುಗಡೆ ಮೂಲಕ ಮತ್ತೊಂದು ಸಾಧನೆಗೆ ಮುನ್ನುಡಿ ಬರೆದಿದೆ.
ಹೌದು.. ಮೊನ್ನೆಯಷ್ಟೇ ತುರ್ತು ಸ್ಪಂದನೆಯಲ್ಲಿ ರಾಜ್ಯದಲ್ಲಿಯೇ ದಾಖಲೆ ಮಾಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮತ್ತಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವ ಹಿನ್ನೆಲೆಯಲ್ಲಿ ಪೋಸ್ಟರ್ ಬಿಡುಗಡೆ ಮೂಲಕ ಸಾಧನೆ ಶ್ರಮಿಸಿದ ಸಿಬ್ಬಂದಿಗೆ ಅಧಿಕಾರಿ ವರ್ಗದವರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತರಾದ ಗೋಪಾಲಕೃಷ್ಣ ಅಭಿನಂದನೆ ಸಲ್ಲಿಸಿದರು.
ಒಟ್ಟಿನಲ್ಲಿ ಲೋಕ ಸ್ಪಂದನ, ಇ-ಸ್ಪಂದನ, ಟ್ರಾಫಿಕ್ ರೂಲ್ಸ್ ಹಾಗೂ ಜನಸ್ನೇಹಿ ನಿರ್ಧಾರಗಳ ಮೂಲಕ ಈಗ ಪೊಲೀಸ್ ಕಮೀಷನರೇಟ್ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ