ಗದಗ: ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು ವಿವಿಧೆಡೆ 18 ಚೆಕ್ ಪೋಸ್ಟಗಳನ್ನು ತೆರೆದು ನಿರಂತರವಾಗಿ ತಪಾಸಣೆ ಮಾಡಲಾಗುತ್ತಿದೆ.
ಬುಧವಾರ ಬೆಟಗೇರಿ ಪೋಲಿಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್ ಪೋಸ್ಟನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ.
ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ ಎಂಬುದರ ಕುರಿತು ಸ್ಥಳಕ್ಕೆ ಆಗಮಿಸಿದ ಆದಾಯ ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.