ಬೆಂಗಳೂರು: ಟಾಟಾ ಏಸ್ ಚಾಲಕನಿಂದ ಡ್ರ್ಯಾಗರ್ ಹಿಡಿದು ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿರುವಂತಹ ಘಟನೆ ರಾಮಮೂರ್ತಿನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ. ಮೊಬೈಲ್ನಲ್ಲಿ ಮಾತಾಡುತ್ತಾ ಸ್ಕೂಟರ್ಗೆ ಟಾಟಾ ಏಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದನ್ನು ಪ್ರಶ್ನೆ ಮಾಡಿದ್ದ ಪ್ರಕಾಶ್ ಎಂಬುವರಿಗೆ ಚಾಲಕನಿಂದ ಬೆದರಿಕೆ ಹಾಕಲಾಗಿದೆ. ಘಟನೆ ಕುರಿತು ಪೊಲೀಸ್ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿರುವ ಸವಾರ ಪ್ರಕಾಶ್, ವಿಡಿಯೋ ಸಮೇತ ದೂರು ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ ಕದೀಮನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವೇಲೂರು ನಿವಾಸಿ ದೀನ್ ದಯಾಳನ್ (48) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಕಳ್ಳತನ ಕೇಸ್ನಲ್ಲಿ ಅಲೆದು ಸಾಕಾಯ್ತು ಅಂತ ಬೆಂಗಳೂರಿನಲ್ಲಿ ಕೇಸ್ ಮಾಡಲಾಗಿದೆ. ಆರೋಪಿ ಲಾರಿ ಕದ್ದು ಪೊಲೀಸರ ಬಲೆಗೆ ಬಿದಿದ್ದಾನೆ.
ಕುಟುಂಬ ನಿರ್ವಹಣೆಗೆಂದೆ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಗೆ ಇಬ್ಬರ ಹೆಂಡತಿಯರು. ಈ ಹಿಂದೆ ವೇಲೂರಿನಲ್ಲಿ ರೋಡ್ ರೋಲರ್ ಸಹ ಕದ್ದು ಸಿಕ್ಕಿ ಬಿದ್ದಿದ್ದ. ಬಳಿಕ ಬೆಂಗಳೂರಿನಲ್ಲಿ ಲಾರಿ ಕಳ್ಳತನ ಮಾಡಿದ್ದ. ಕಳ್ಳತನವಾದ ಬೆನ್ನಲ್ಲೆ ಸಿಸಿಟಿವಿಗಳ ಬೆನ್ನು ಬಿದ್ದ ಪೊಲೀಸರು ಕೃತ್ಯ ನಡೆದ 11 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಲಾಗಿದೆ. ಕೊಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.