ನಟ ಕಿಚ್ಚ ಸುದೀಪ್ ಗೆ ಖಾಸಗಿ ವಿಡಿಯೋ ಬೆದರಿಕೆ ಪತ್ರ ಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು ಸಿಸಿಬಿ ಕಚೇರಿಗೆ ಭೇಟಿ ನೀಡಿದ್ದಾರೆ.
ಸಿಸಿಬಿ ಅಧಿಕಾರಿಗಳು ವಿವರಣೆಗೆ ಕರೆದ ಹಿನ್ನೆಲೆಯಲ್ಲಿ ಮಂಜು ಭೇಟಿ ನೀಡಿದ್ದು, ಸುದೀಪ್ ಅವರಿಗೆ ಬಂದಿದ್ದ ಎರಡು ಪತ್ರಗಳು ಕುರಿತಾಗಿ ವಿವರಣೆ ನೀಡಿದ್ದಾರೆ. ಅಲ್ಲದೇ ಜಾಕ್ ಮಂಜು ಕೆಲವರ ಬಗ್ಗೆ ಅನುಮಾನವನ್ನೂ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಈವರೆಗೂ ಸುದೀಪ್ ಮೇಲೆ ನಡೆದ ಕುತಂತ್ರಗಳ ಬಗ್ಗೆಯೂ ಮಂಜು ಅಧಿಕಾರಿಗಳಿಗೆ ವಿವರಿಸಿದ್ದಾರೆ ಎನ್ನಲಾಗುತ್ತಿದೆ.
ಸಿನಿಮಾ ರಂಗದವರೇ ಬೆದರಿಕೆ ಪತ್ರದ ಪ್ರಕರಣದ ಹಿಂದಿದ್ದಾರೆ ಎಂದು ಸುದೀಪ್ ಹೇಳಿದ್ದು, ಅವರಿಗೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇನೆ ಎಂದಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ ಸಿಸಿಬಿ ಅಧಿಕಾರಿಗಳು.