ಬೆಂಗಳೂರು: ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ.ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ ಎಂದು ಪ್ರಶ್ನಿಸಿದ್ದಾರೆ.
ಭರವಸೆ ನೀಡಿದಂತೆ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು.
ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ ಮೋದಿಯವರೇ ಎಂದು ಕೇಳಿದ್ದಾರೆ. ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ