ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಮಂಗಳವಾರ ರಾತ್ರಿ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಒಟ್ಟು 189 ಅಭ್ಯರ್ಥಿಗಳ ಪೈಕಿ 8 ಮಹಿಳೆಯರಿಗೆ ಟಿಕೆಟ್ (Karnataka BJP Women Candidates) ಘೋಷಿಸಿದೆ.
ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್ ಹಾಗೂ ರೂಪಾಲಿ ಸಂತೋಷ್ ನಾಯ್ಕ್ ಹಾಲಿ ಶಾಸಕರು. ಈ ಬಾರಿ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರೊಂದಿಗೆ 5 ಮಂದಿ ವಕೀಲರು, 9 ಮಂದಿ ವೈದ್ಯರು, ಒಬ್ಬರು ನಿವೃತ್ತ ಐಎಎಸ್, ಒಬ್ಬರು ಐಪಿಎಸ್ ಅಧಿಕಾರಿಗೆ ಟಿಕೆಟ್ ಘೋಷಣೆ ಮಾಡಿದೆ.
ಯಾರಿಗೆ ಎಲ್ಲಿ ಬಿಜೆಪಿ ಟಿಕೆಟ್?
1. ನಿಪ್ಪಾಣಿ – ಶಶಿಕಲಾ ಜೊಲ್ಲೆ
2. ಹಿರಿಯೂರು – ಪೂರ್ಣಿಮಾ ಶ್ರೀನಿವಾಸ್
3. ಸವದತ್ತಿ – ರತ್ನಾ ವಿಶ್ವನಾಥ್ ಮಾಮನಿ
4. ಕಾರವಾರ – ರೂಪಾಲಿ ನಾಯ್ಕ್
5. ಸಂಡೂರು – ಶಿಲ್ಪಾ ರಾಘವೇಂದ್ರ
6. ನಾಗಮಂಗಲ – ಸುಧಾ ಶಿವರಾಮೇಗೌಡ
7. ಪುತ್ತೂರು – ಆಶಾ ತಿಮ್ಮಪ್ಪ ಗೌಡ
8. ಸುಳ್ಯ – ಭಾಗೀರಥಿ ಮುರುಳ್ಯ