ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ನಾಮಪತ್ರ ( Nomination File) ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವಾದ ಗುರುವಾರ ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ನಾಮಪತ್ರವನ್ನು ಅಭ್ಯರ್ಥಿಗಳು ಸಲ್ಲಿಸಿದ್ದಾರೆ.
ಮೊದಲ ದಿನವೇ ರಾಜ್ಯದ ವಿವಿಧೆಡೆ 221 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗವು ಮಾಹಿತಿಯನ್ನು ನೀಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಮೊದಲ ದಿನ 197 ಪುರುಷ ಅಭ್ಯರ್ಥಿಗಳು, 24 ಮಹಿಳಾ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿರುವುದಾಗಿ ತಿಳಿಸಿದೆ.
ಗುರುವಾರ ಬಿಜೆಪಿ ಪಕ್ಷದಿಂದ 27 ಅಭ್ಯರ್ಥಿಗಳು, ಕಾಂಗ್ರೆಸ್ ಪಕ್ಷದಿಂದ 26, ಎಎಪಿ ಪಕ್ಷದಿಂದ 10, ಬಿಎಸ್ಪಿ ಪಕ್ಷದಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ 100 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ಮೊದಲ ದಿನವೇ ರಾಜ್ಯಾಧ್ಯಂತ 221 ಮಂದಿ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸರುವುದಾಗಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಾಹಿತಿಯನ್ನು ನೀಡಿದೆ.
ಅಂದಹಾಗೇ ವಿಧಾನಸಭಾ ಚುನಾವಣೆಗೆ ( Assembly Election ) ಮೇ.10ರಂದು ಮತದಾನ ನಡೆದು, ಮೇ.13ರಂದು ಮತಏಣಿಕೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ. ಈ ಚುನಾವಣೆಗೆ ಇಂದಿನಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಂಡಿದೆ. ಮೇ.20 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗೆ ಸಲ್ಲಿಸಿದಂತ ನಾಮಪತ್ರಗಳ ಪರಿಶೀಲನೆ ಮೇ.21ರಂದು ನಡೆಯಲಿದೆ. ಮೇ.24 ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.
ಏ.15ರಂದು ಹಾವೇರಿಯ ಶಿಗ್ಗಾಂವಿ ಕ್ಷೇತ್ರದಿಂದ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ