ಟೋಕಿಯೋ: ಪಶ್ಚಿಮ ಜಪಾನ್ನ ವಕಯಾಮಾದಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಭಾಷಣ ಮಾಡುತ್ತಿದ್ದ ವೇಳೆ ಹತ್ತಿರದಲ್ಲೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ.
ಕಿಶಿಡಾ ಭಾಷಣದ ವೇಳೆ ಸ್ಫೋಟಕ ವಸ್ತುವನ್ನು ಎಸೆಯಲಾಗಿದ್ದು, ತಕ್ಷಣವೇ ಕಿಶಿಡಾ ಅವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ ಪ್ರಧಾನಿ ಭಾಷಣ ಮಾಡುತ್ತಿದ್ದ ವೇಳೆ ಅನುಮಾನಾಸ್ಪದ ವಸ್ತುವನ್ನು ಪ್ರಧಾನಿ ಎಡೆಗೆ ಎಸೆಯಲಾಗಿದೆ. ಈ ವೇಳೆ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸದ್ಯ ಘಟನಾ ಸ್ಥಳದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಅಧಿಕಾರಿಗಳು ಸ್ಥಳದಲ್ಲಿದ್ದ ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.