ಬೆಂಗಳೂರು: ಟಿಕೆಟ್ ನೀಡುವುದಾಗಿ ಬಿಜೆಪಿ ಸಬೂಬು ಹೇಳುತ್ತಲೇ ಬಂದಿದ್ದು, ಅದಕ್ಕೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ ಎಂದು ಬಿಬಿಎಂಪಿ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಬಸವನಗುಡಿಯಲ್ಲಿ ಮಾತನಾಡಿದ ಅವರು, ನಾನು ಬಸವನಗುಡಿ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಸೀನಿಯರ್ ಇದ್ದೇನೆ. ಈ ಹಿಂದೆ ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದೆ. ಪ್ರತಿ ಬಾರಿಯೂ ಕೇಳುತ್ತಲೇ ಇದ್ದೇನೆ ಅವರು ಸಬೂಬು ಹೇಳಿಕೊಂಡು ಬರುತ್ತಲೇ ಇದ್ದಾರೆ.
ಆದರೆ ಯಾಕೋ ಪಕ್ಷ ನನಗೆ ಮಣೆ ಹಾಕಿಲ್ಲ. ಆದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ಬ್ಯಾಟರಾಯನಪುರ ಕ್ಷೇತ್ರದ ಬಳಿಕ ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಬಹಳ ವರ್ಷಗಳಿಂದ ಬಿಜೆಪಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಈ ಬಾರಿ ಟಿಕೆಟ್ ಸೀಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಪಕ್ಷ ಬಿಜೆಪಿಯ ರವಿ ಸುಬ್ರಮಣ್ಯ ಎಂಬುವವರಿಗೆ ಟಿಕೆಟ್ ನೀಡಿದೆ. ಇದರಿಂದ ಬಂಡಾಯ ಎದ್ದಿರುವ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಲು ತೀರ್ಮಾನಿಸಿದ್ದಾರೆ.