ಬೆಂಗಳೂರು : ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಬೆನ್ನಲ್ಲೆ ಸಚಿವ ಗೋವಿಂದ ಎಂ ಕಾರಜೋಳ ಮಾತನಾಡಿ, ರಾಜಕೀಯ ನಾಯಕರು ಅವಸರದ ನಿರ್ಧಾರ ಕೈಗೊಳ್ಳಬಾರದು ಎಂದು ಪ್ರತಿಕ್ರಿಯಿಸಿದ್ದಾರೆ. ವಿಧಾನ ಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚನೆ ಗೊಳಲಾದ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ ವಿಚಾರ ಭಾರೀ ಸಂಚಲನ ಸೃಷ್ಟಿಸಿದೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ರಾಯಚೂರು ನಗರದಲ್ಲಿ ಸಚಿವ ಗೋವಿಂದ ಎಂ ಕಾರಜೋಳ ಮಾತನಾಡಿ, ಆತುರದ ನಿರ್ಧಾರದಿಂದ ನಮ್ಮ ಮೂಗನ್ನು ನಾವೇ ಕುಯ್ದುಕೊಂಡಂತೆ, ನೆಲೆ ಇಲ್ಲದ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಹುಡುಕುತ್ತಿದೆ. ಹೀಗಾಗಿ ಬಿಜೆಪಿ ಟಿಕೆಟ್ ವಂಚಿತರ ಕೈ ಕಾಲು ಹಿಡಿದು ಅಭ್ಯರ್ಥಿಗಳನ್ನು ಕರೆದೊಯ್ಯುತ್ತಿದ್ದಾರೆ. ಅವಸರದ ನಿರ್ಧಾರ ಯಾವ ನಾಯಕರು ಮಾಡುವುದು ಬೇಡ. ಹೊಸಬರನ್ನ ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎನ್ನುವ ಮೂಲಕ ರಾಜೀನಾಮೆ ತೆಗೆದುಕೊಂಡ ನಾಯಕರಿಗೆ ಸಚಿವ ಗೋವಿಂದ ಎಂ ಕಾರಜೋಳ ಖಡಕ್ ವಾರ್ನಿಂಗ್ ನೀಡಿದ್ದಾರೆ.