ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಕ್ಷೇತ್ರದ ಮತ್ತು ನಾಡಿನ ಜನರ ಒಳಿತಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಸಚಿವರ ಮಲ್ಲೇಶ್ವರದ ನಿವಾಸದಲ್ಲಿ ವಿಶೇಷ ಹೋಮ ನೆರವೇರಿತು.
ಸಚಿವರು ಬೆಳಗ್ಗೆ ತಮ್ಮ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರ ಜೊತೆಯಲ್ಲಿ ಬಾಲಾಂಜನೇಯ ದೇವಸ್ಥಾನ, ಕಾಡು ಮಲ್ಲೇಶ್ವರ ದೇಗುಲ, ಗಂಗಮ್ಮನ ದೇವಸ್ಥಾನ, ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ, ಶೇಷಾದ್ರಿಪುರಂನ ಶ್ರೀ ಕೋಡಿ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನಗಳಿಗೆ ಭೇಟಿ ಕೊಟ್ಟರು.ಈ ಸಂದರ್ಭದಲ್ಲಿ ದೇಗುಲಗಳ ಅರ್ಚಕರು ಸಚಿವರಿಗೆ ಶಾಲು ಮತ್ತು ದೇವರ ಪ್ರಸಾದ, ಫಲ ತಾಂಬೂಲ ನೀಡಿ, ಸತ್ಕರಿಸಿದರು.