ಬೆಂಗಳೂರು: ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಲೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಅದರ ಭಾಗವಾಗಿ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಷದ್ ಅವರು, ದರ್ಗಾ ಕೈ ಮುಗಿದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇನ್ನೂ ಇದೇ ವೇಳೆ ರಿಜ್ವಾನ್ ಹರ್ಷದ್ ಬೆಂಬಲಿಗರಿಂದ ನಿಯಮ ಉಲ್ಲಂಘನೆ ಮಾಡಲಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಮೆರವಣಿಗೆಯಲ್ಲಿ ಭಾಗಿ ಆಗಿರುವುದು ಕಂಡು ಬಂದಿದೆ. ನಾಮಪತ್ರ ಸಲ್ಲಿಕೆ ವೇಳೆ ಪುಟ್ಟ ಪುಟ್ಟ ಮಕ್ಕಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ರ್ಯಾಲಿಯಲ್ಲಿ ಮಕ್ಕಳು ಭಾಗಿಯಾಗಿರುವುದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗಿದೆ.