ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 20 ದಿನಗಳು ಮಾತ್ರ ಬಾಕಿ ಇವೆ. ಎಲ್ಲೆಡೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದೆ. ಇದರ ನಡುವೆ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದು ಪದೇ ಪದೇ ದಾಳಿ ನಡೆಸುತ್ತಿದ್ದಾರೆ(IT Raid). ಕಳೆದ ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು.
ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.ಇಂದು ಮುಂಜಾನೆಯಿಂದಲೇ ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಹಲವಾರು ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ.