2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಜಯನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಸೌಮ್ಯ ರೆಡ್ಡಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಲು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಬಳಿಕ ಮಾತನಾಡಿದ ಸೌಮ್ಯ ರೆಡ್ಡಿ,
ನಿಮ್ಮೆಲ್ಲರ ಪ್ರೀತಿಯ ಋಣಭಾರ ನನ್ನ ಮೇಲಿದ್ದು ಜಯನಗರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೆ ಬೆಂಬಲ ನೀಡಿ ಆಶೀರ್ವದಿಸಿ ನಿಮ್ಮ ಋಣ ತೀರಿಸುವ ಅವಕಾಶ ನೀಡುವಂತೆ ಸವಿನಯವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಪಾಲಿಕೆ ಸದಸ್ಯರಾದ ರಿಜ್ವಾನ್ ನವಾಬ್, ಎನ್.ನಾಗರಾಜ್, ದಿವಾಕರ್, ಬ್ಲಾಕ್ ಅಧ್ಯಕ್ಷರಾದ ಅರುಣ್ ಕುಮಾರ್, ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಎಲ್ಲಾ ಮುಂಚೂಣಿ ಘಟಕಗಳ ಸದಸ್ಯರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಪ್ರೀತಿಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.