ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 10,542 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,31,190 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 63,562 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,50,649 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.ನಿನ್ನೆ 487 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,27,758 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,40,014 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.