ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಸೂಪರ್ ಹಿಟ್ ‘ಪುಷ್ಪ’ ಸಿನಿಮಾದ ನಿರ್ದೇಶಕ ಸುಕುಮಾರ್ ಹಾಗೂ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಮೇಲೆ ಐಟಿ ಇಲಾಖೆ ದಾಳಿ ನಡೆಸಿದೆ.
ಸುಕುಮಾರನ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದು, ‘ಮೈತ್ರಿ ಮೂವೀ ಮೇಕರ್ಸ್’ ನಿರ್ಮಾಪಕರಾದ ನವೀನ್ ಯೆರ್ನೇನಿ ಹಾಗೂ ರವಿ ಯಲಮಂಚಿಲಿ ಅವರ ಮನೆ ಮೇಲೂ ದಾಳಿ ಆಗಿದೆನಡೆಸಲಾಗಿದೆ. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸುಕುಮಾರ್ ಹಾಗೂ ಮೈತ್ರಿ ಮೂವೀ ಮೇಕರ್ಸ್ ಜಿಎಸ್ಟಿ ಪಾವತಿಯಲ್ಲಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಇದರಿಂದ ನಿರ್ಮಾಪಕರು ದೊಡ್ಡ ಲಾಭ ಗಳಿಸಿದ್ದರು.
ಸುಕುಮಾರ್ ಅವರು ನಿರ್ದೇಶಕರಾಗಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ಅವರು ನಿರ್ಮಾಣ ಸಂಸ್ಥೆಯನ್ನೂ ಹೊಂದಿದ್ದಾರೆ. ಇದಕ್ಕೆ ‘ಸುಕುಮಾರ್ ರೈಟಿಂಗ್ಸ್’ ಎಂದು ಹೆಸರು ಇಟ್ಟಿದ್ದಾರೆ. ಅನೇಕ ನಿರ್ಮಾಣ ಸಂಸ್ಥೆಗಳ ಜೊತೆ ಕೈ ಜೋಡಿಸಿ ಇವರು ಸಿನಿಮಾ ನಿರ್ಮಾಣ ಮಾಡುತ್ತಾರೆ. ವರುಣ್ ತೇಜ್ ಮುಂದಿನ ಸಿನಿಮಾ ‘ವಿರೂಪಾಕ್ಷ’ಕ್ಕೆ ಸುಕುಮಾರ್ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಏಪ್ರಿಲ್ 21ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗ ಐಟಿ ರೇಡ್ ನಡೆದಿದೆ.