ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದರು.
ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಪಕ್ಷ ಸೂಚಿಸುತ್ತಿದ್ದಂತೆ ಯಾವುದೇ ಮರು ಮಾತಾಡದೇ ಪಕ್ಷದ ಆದೇಶವನ್ನು ಪಾಲನೆ ಮಾಡಿದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಇನ್ನು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದರು.
ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.
ಕರೆಯಲ್ಲಿ ಏ