ಬೆಂಗಳೂರು: ಕುಖ್ಯಾತ ಕನ್ನ ಕಳವು ಮಾಡುತ್ತಿದ್ದ ಖತರ್ನಾಕ್ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಂಪಗಿರಾಮ, ರಮೇಶ, ವೆಂಕಟೇಶ, ಭೀಮಾಶಂಕರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು, ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನ್ನ ಕಳವು ಮಾಡಿ ತಲೆ ಮರೆಸಿಕೊಂಡಿದ್ದರು.
ಹಲಸೂರು ಗೇಟ್, ಕೆ.ಆರ್. ಪುರಂ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಹನುಮಂತನಗರ, ಬೇಗೂರು ಸೇರಿ ಹಲವೆಡೆ ತಮ್ಮ ಕೈ ಚಳಕ ತೋರಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇನ್ನೂ ಬಂಧಿತರಿಂದ 28 ಲಕ್ಷ ಮೌಲ್ಯದ 475 ಗ್ರಾಂ ಚಿನ್ನವನ್ನು ಸೀಜ್ ಮಾಡಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.