ಬೆಂಗಳೂರು: ಸಾಕಷ್ಟು ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ಅಂಗೀಕಾರಗೊಂಡಿದೆ. ಇದರಿಂದ ಕನಕಪುರದಲ್ಲಿ ಸ್ಪರ್ಧಿಸುವುದು ಪಕ್ಕಾ ಆಗಿದೆ. ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ಮಾಹಿತಿ ಮತ್ತು ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಬೇರೆಯೇ ಇದೆ. ಹೀಗಾಗಿ ಡಿಕೆಶಿ ನಾಮಪತ್ರ ತಿರಸ್ಕಾರ ಆಗುವ ಆತಂಕವಿತ್ತು. ಆದರೆ ಎಲ್ಲ ಆಂತಕಗಗಳು ಶಮನವಾಗಿದೆ.. ಆದರೆ ಆದಾಯ ತೆರಿಗೆ ನೋಟಿಸ್ ಹಿನ್ನೆಲೆ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಭೀತಿಯಿತ್ತು.
ಹೀಗಾಗಿ ಅವರ ಸಹೋದ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ಡಿಕೆಶಿ ನಾಮಪತ್ರ ಸ್ವೀಕೃತವಾಗಿದ್ದು, ದೊಡ್ಡ ತಲೆನೋವು ಕಳೆದಂತಾಗಿದೆ. ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ ಸಂತೋಷ್ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಅಫಿಡವಿಟ್ ಸೇರಿ ಇನ್ನಿತರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಡಿಕೆಶಿ 4 ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳನ್ನೂ ಸ್ವೀಕೃತಗೊ ಳಿಸಲಾಗಿದೆ. ಡಿಕೆಶಿಯ ನಾಮಪತ್ರ ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ನಾಮಪತ್ರ ಹಿಂದಕ್ಕೆ ಪಡೆಯಲಿದ್ದು ಯಾವಗಾ ಹಿಂದಕ್ಕೆ ಪಡೆಯುತ್ತಾರೆ ಎಂಬುದು ತಿಳಿದು ಬಂದಿಲ್ಲ.