ಬೆಂಗಳೂರು: ಮಾಜಿ ಶಾಸಕ ಗಂಗಹನುಮಯ್ಯ ಸೇರಿದಂತೆ ತುಮಕೂರು ಜಿಲ್ಲೆಯ ಹಲವು ಮುಖಂಡರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಗೊಂಡ ನೂತನ ಕಾರ್ಯಕರ್ತರಿಗೆ ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬರಮಾಡಿಕೊಂಡು ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ಡಿಕೆಶಿ, ಸಾವಿರಾರು ಕಾರ್ಯಕರ್ತರು ಪಕ್ಷ ಸೇರ್ಪಡೆ ಆಗಿದ್ದು, ನಾಮಪತ್ರ ಸಲ್ಲಿಕೆ ಆಗಿದೆ. ಇದೀಗ ಅದು ಪರಿಶೀಲನೆ ನಡೆಯುತ್ತಿದೆ. ಮೇ 10 ಬದಲಾವಣೆಗೆ ನಾಂದಿ ಹಾಡುವ ದಿನ. ಇನ್ನೂ ಗಂಗ ಹನುಮಯ್ಯ ಅವರ ಜೊತೆ ನಾನು ಶಾಸಕನಾಗಿ ಕೆಲಸ ಮಾಡಿದ್ದೇನೆ. ಇವತ್ತು ಅವರು ಪರಮೇಶ್ವರ್ ಅವರಿಗೆ ಬೆಂಬಲ ಕೊಡಲು ಬಂದಿದ್ದಾರೆ.
ಪರಿಶಿಷ್ಟ ಜಾತಿಯ ಪ್ರಮುಖ ಮುಖಂಡರು. ಶಾಂತಕುಮಾರಿ ಅವರು ನಿನ್ನೆ ನಮ್ಮ ಮಾಜಿ ಮಂತ್ರಿಗಳನ್ನು ಭೇಟಿ ಮಾಡಿ ಮಾತಾಡಿದ್ದಾರೆ. ಮಾಜಿ ಮಂತ್ರಿಗಳು ಸೇರಿಸಿಕೊಳ್ಳಿ ಎಂದು ಹೇಳಿದ್ರು. ನಂಜುಂಡಪ್ಪ ಅವರು ಎಲ್ಲ ಸರಿ ಇದಿದ್ದರೇ ಶಾಸಕರು ಆಗಬೇಕಿತ್ತು ಎಂದು ಡಿಕೆಶಿ ಹೇಳಿದರು. ಇನ್ನೂ ಗಂಗಹನುಮಯ್ಯ ಅವರೊಂದಿಗೆ ಕಮಲಾ ಗಂಗಹನುಮಯ್ಯ, ಬಿಜೆಪಿ ತುಮಕೂರು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜ, ಪರಿಶಿಷ್ಟ ಜಾತಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ, ಮುಖಂಡರಾದ ರಾಮಕೃಷ್ಣ, ತಿಮ್ಮಯ್ಯ,ಶಿವಕುಮಾರ್, ಸಿದ್ದಪ್ಪ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ರಪಮೇಶ್ವರ್, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಇದ್ದರು.