ಬೆಂಗಳೂರು: ಶೋಭಾ ಕರಂದ್ಲಾಜೆ ಅವರು ಯಾರ ಪ್ರಭಾವದಿಂದ ಮಂತ್ರಿಯಾಗಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಿನ್ನೆ ಕೆಪಿಸಿಸಿ ವತಿಯಿಂದ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಶೋಭಾ ಕರಂದ್ಲಾಜೆ ಅವರು ಮಾಡಿರುವ ಗಂಭೀರವಾದ ಪ್ರಚೋದನಾಕಾರಿ ಹೇಳಿಕೆ ಬಗ್ಗೆ ದೂರು ದಾಖಲಿಸುತ್ತೇವೆ.
ಇದೇ ಸಮಯದಲ್ಲಿ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಧರ್ಮ, ಜಾತಿ ಹೆಸರಲ್ಲಿ ಕಾಂಗ್ರೆಸ್ ನಾಯಕರನ್ನು ಕ್ರಿಮಿನಲ್ ಗಳು ಎಂಬ ದ್ವೇಷಪೂರಿತ ಸುಳ್ಳು ಆರೋಪ ಮಾಡಿದರೂ ಕೇಂದ್ರ ಚುನಾವಣಾ ಆಯೋಗ ಯಾಕೆ ಯಾವುದೇ ಪ್ರಕರಣ ದಾಖಲಿಸಿಲ್ಲ? ಬಿಜೆಪಿ ಟೂಲ್ ಕಿಟ್ ಭಾಗವಾಗಿ ಈ ಮೂವರು ನಾಯಕರು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಮಾತನಾಡುತ್ತಾರೆ ಎಂದರು.
ಈ ರೀತಿಯ ಪ್ರಚೋದನಾಕಾರಿ ಭಾಷ್ಣ ಕಾನೂನಿನ ಪ್ರಕಾರ ಅಫರಾಧವಾಗಿದ್ದು, ಇದಕ್ಕೆ ತಕ್ಕ ಶಿಕ್ಷೆ ಆಗಬೇಕು. ಶೋಭಾ ಕರಂದ್ಲಾಜೆ ಅವರು ಯಾರ ಪ್ರಭಾವದಿಂದ ಮಂತ್ರಿಯಾಗಿದ್ದಾರೆ, ಗುಂಪುಗಾರಿಕೆಯಲ್ಲಿ ಯಾರ ಪರವಾಗಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಶೋಭಾ ಅವರು ಕೇಂದ್ರ ಕೃಷಿ ಸಚಿವರಾಗಿ ರಾಜ್ಯದ ಪರವಾಗಿ ಒಂದು ದಿನ ಧ್ವನಿ ಎತ್ತಿಲ್ಲ. ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ 90 ಲಕ್ಷ ರೈತರಿಗೆ0 5 ಕೋಟಿಗೂ ಹೆಚ್ಚು ಸಹಾಯಧನ ಬಿಡುಗಡೆಯಾಗಿಲ್ಲ. ಕೇಂದ್ರದ ಸಿಎಜಿ ವರದಿಯಲ್ಲಿ ಇದನ್ನು ಸ್ಪಷ್ಟವಾಗಿ ಹೇಳಿದೆ ಎಂದು ಹೇಳಿದ್ದಾರೆ.