ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾಧಿಕಾರಿಗಳು ಅಂಗೀಕಾರ ಮಾಡಿದ್ದಾರೆ. ಯಲಹಂಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡಿಲ್ಲ. ಅವರು ಮುಚ್ಚಿಟ್ಟಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಎಸ್ ಆರ್ ವಿಶ್ವನಾಥ್ ಸಲ್ಲಿಸಿರುವಂತ ನಾಮಪತ್ರವನ್ನು ತಿರಸ್ಕರಿಸುವಂತೆ ಜೆಡಿಎಸ್ ಪಕ್ಷದ ಕಾನೂನು ವಿಭಾಗದಿಂದ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಜೆಡಿಎಸ್ ಕಾನೂನು ವಿಭಾಗದ ದೂರಿನ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ನಾಮಪತ್ರ ತಿರಸ್ಕಾರಗೊಳ್ಳುವ ಭೀತಿ ಎದುರಾಗಿತ್ತು. ಆದ್ರೇ ಅಂತಿಮವಾಗಿ ಯಲಹಂಕ ವಿಧಾನಸಭಾ ಕ್ಷಏತ್ರದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ಅವರ ವಿರುದ್ಧ ಸಲ್ಲಿಸಿದ್ದಂತ ತಕರಾರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಬಳಿಕ ಬಿಜೆಪಿ ಅಭ್ಯರ್ಥಿಯ ನಾಮಪತ್ರವನ್ನು ಅಂಗೀಕರಿಸಿದ್ದಾರೆ.