ಬೆಂಗಳೂರು: ಬಿಬಿಎಂಪಿಯು 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವೆಸಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಎಎಪಿ ಕಚೇರಿಯಲ್ಲಿ ಮಾತನಾಡಿದ ಅವರು, 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ ಈ ಪೈಕಿ ಶೇಕಡಾ 90ರಷ್ಟು ಜನರಿಗೆ ವಾಹನ ವಿತರಿಸಿಲ್ಲ ಎಂದು ಆರೋಪಿಸಿದರು. ಈ ವಾಹನ ಪೂರೈಕೆ ಯೋಜನೆಯು ಒಟ್ಟು 223 ಕೋಟಿ ರೂಪಾಯಿಯ ಕಾರ್ಯಕ್ರಮವಾಗಿದೆ. ವಾಹನ ವಿತರಿಸದ ಕಾರಣ ಇಷ್ಟು ಪ್ರಮಾಣದ ಹಣ ಎಲ್ಲಿ ಹೋಗಿದೆ. ಆ ಬಗ್ಗೆ ಅಗತ್ಯ ತನಖೆಯಾಗಬೇಕು.
ಚುನಾವಣಾ ಆಯೋಗ ಈ ಬಗ್ಗೆ ನಿಗಾ ವಹಿಸಬೇಕು ಎಂದು ಅವರು ಮನವಿ ಮಾಡಿದರು. ವಾಹನ ವಿತರಣೆ ಸಂಬಂಧ ಅಧಿಕಾರಿಗಳು ಸರ್ಕಾರದಲ್ಲಿನ ಖಾತೆಗಳ ವಿಭಾಗದಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎಂದು ಹೇಳಿದ ಹಣ ಏನಾಯಿತು? ಎಂಬ ಫಲಾನುಭವಿಗಳ ಪ್ರಶ್ನೆಗೆ ಸರ್ಕಾರದಿಂದ ಉತ್ತರ ಸಿಕ್ಕಿಲ್ಲ. ಹೀಗೆ ಪ್ರಶ್ನಿಸುವವರು ವಾಹನವನ್ನು ಸ್ವೀಕರಿಸಿಲ್ಲ. ಲೆಕ್ಕಪತ್ರ ಇಲಾಖೆಯು ಬಿಲ್ಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿದ್ದು, ಕೆಲವರು ಬಿಬಿಎಂಪಿಯ ಹಣಕಾಸು ವಿಭಾಗದಿಂದ ಹಂಚಿಕೆ ಮಾಡಿದ್ದನ್ನು ಬಹಿರಂಗವಾಗಿ ಕೇಳಿದ್ದಾರೆ. ಆದ್ದರಿಂದ ಬಿಬಿಎಂಪಿ ವಿರುದ್ಧ ತನಿಖೆಯಾಗಬೇಕು ಎಂದು ಹೇಳಿದರು.