ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಆಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರುನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ.
ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದ ರಾಜ್ಯದಲ್ಲಿ ಕಳೆದ 15 ದಿನದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.