ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮತಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರ ಸುಳ್ಳು ಸುದ್ದಿ ಹರಿಬಿಡುತ್ತಿದ್ದಾರೆ ಅವುಗಳಿಗೆ ಯಾರು ಕಿವಿಗೊಡಬೇಡಿ ತೇರದಾಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದು ಶತಸಿದ್ಧ ಎಂದು ಡಾ.ಪದ್ಮಜೀತ ನಾಡಗೌಡ ಪಾಟೀಲ. ಹೇಳಿದರು.
ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ವಿಧಾನ ಸಭಾ ಚುನಾವಣೆಯಲ್ಲಿ ಡಾ. ಪದ್ಮಜೀತ ನಾಡಗೌಡ ಪಾಟೀಲರು ಹಾಗೂ ಡಾ.ಎ.ಆರ್ ಬೆಳಗಲ್ಲಿ.ಯವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದು. ಅದು ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವ ಮಾತೆ ಇಲ್ಲಾ. ಈಗಾಗಲೇ ನಾಮಪತ್ರ ಪರಿಶೀಲನೆ ಕಾರ್ಯ ಮುಕ್ತಾಯಗೊಂಡಿದೆ.
ನಾವು ಇಬ್ಬರು ಅಭ್ಯರ್ಥಿಗಳ ಹಿರಿಯರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸೋಮವಾರ ದಿವಸ ಒಬ್ಬರು ನಾಮಪತ್ರ ವಾಪಸ್ ಪಡೆದದ್ದು ಈ ಚುನಾವಣೆಯಲ್ಲಿ ಒಬ್ಬರನ್ನು ಕಣಕ್ಕೆ ಇಳಿಯುವುದು ಖಚಿತವೆಂದು ಸ್ಪಷ್ಟಪಡಿಸಿದ್ದಾರೆ. ಕಿಡಿಗೇಡಿಗಳ ವದಂತಿಗೆ ಕಿವಿ ಕೊಡದೆ ಸಂಪೂರ್ಣ ನಿಮ್ಮ ಬೆಂಬಲ ನಮಗಿರಲಿ ಎಂದು ಮನವಿ ಮಾಡಿದರು.
ವರದಿ: ಪ್ರಕಾಶ ಕುಂಬಾರ, ಬಾಗಲಕೋಟೆ