ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ ದೂರು ನೀಡಿತ್ತು. ಈ ಸಂಬಂಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಕಳವುವಾಗಿರುವ ಅನುಮಾನವಿದ್ದರಿಂದ ಡೆಲ್ಲಿ ಕ್ಯಾಪಿಟಲ್ ತಂಡ ಈ ಬಗ್ಗೆ ಬೆಂಗಳೂರು ಪೊಲೀಸರನ್ನು ಸಂಪರ್ಕ ಮಾಡಿದ್ದರು. ಬೆಂಗಳೂರು ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಕೊನೆಗು ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕಳವಾಗಿದ್ದ 17 ಬ್ಯಾಟ್ಗಳು, ಗ್ಲೌಸ್, ಹೆಲ್ಮೇಟ್, ಪ್ಯಾಡ್ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.