ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಖ್ಯಾತ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಶರತ್ ಬಾಬು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ನಿನ್ನೆ ಶರತ್ ಬಾಬು ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣದಿಂದಾಗಿ ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
1973ರಲ್ಲಿ ತೆರೆಕಂಡ ತೆಲುಗಿನ ರಾಮ ರಾಜ್ಯಂ ಚಿತ್ರದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ಶರತ್ ಬಾಬು ತಮಿಳು, ಮಲಯಾಳಂ, ಕನ್ನಡ ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2018ರ ಬಳಿಕ ಸಿನಿಮಾಗಳಿಂದ ದೂರವಿರುವ ಶರತ್ ಬಾಬು ಆಗೊಂದು ಈಗೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.